ಆರೋಗ್ಯ ಕೈಕೊಟ್ಟು ಹತ್ತು ದಿನ ಆಸ್ಪತ್ರೆಯ ಹಾಸಿಗೆಯಲ್ಲಿ ಮಲಗಿ ಬ್ಲಾಗ್ ಲೋಕದತ್ತ ಬರಲಾಗಿರಲಿಲ್ಲ. ಯಾರ ಬ್ಲಾಗಿಗೂ ಬೇಟಿ ಕೊಡಲಿಲ್ಲ. ದಯವಿಟ್ಟು ಕ್ಷಮಿಸ್ತೀರಲ್ಲ!ಈಗ ಮನೆಯಲ್ಲಿ ಬೆಡ್ ರೆಸ್ಟ್ ತೆಗೆದುಕೊಳ್ತಾ ಇದ್ದೇನೆ. ಜೊತೆಗೇ ನನ್ನ ಲ್ಯಾಪ್ ಕೂಡ ನನ್ನ ಕೈ ಸೇರಿದೆ! ಇನ್ನು ಎಲ್ಲಾ ಗೆಳೆಯರ ಬ್ಲಾಗಿಗೂ ಬರುತ್ತೇನೆ.
ಈ ಕವನ ಸುಮಾರು ಎಂಟು ವರ್ಷಗಳ ಹಿಂದೆ ಅವಳನ್ನು ನೋಡಿದಾಗ ಬರೆದದ್ದು. ಡೈರಿಯ ಯಾವುದೋ ಮೂಲೆಯಲ್ಲಿದ್ದ ಈ ಕವನವನ್ನು ಈಗ ನಿಮ್ಮ ಮುಂದಿಟ್ಟಿದ್ದೇನೆ. ಹೇಗಿದೆ ಅಂತ ಹೇಳಿ.
ಆಕೆಯಿಂದ ಬಂದ ಅಭಿಪ್ರಾಯ ಏನು ಗೊತ್ತಾ?
"ತುಂಬಾ ಕೆಟ್ಟದಾಗಿದೆ"
ನಿಜವಾಗಿಯೂ ಅಷ್ಟು ಕೆಟ್ಟದಾಗಿದೆಯಾ? ನೀವೇ ಹೇಳ್ಬೇಕು.................
ಬಳುಕುವ ವಯ್ಯಾರಕೆ..........
ನಾ ಮರೆತು ಹೋದೆ ಜಗವಾ
ನಾ ಮರೆತು ಹೋದೆ ಜಗವಾ
ಮನ್ಮಥನ ರಾಣಿಯ ಹೋಲುವ ನೀನು
ರತಿದೇವಿಯ ತಂಗಿಯೇ
ಆಗಸದಿಂದ ಧರೆಗಿಳಿದ ರಂಭೆ
ಊರ್ವಶಿಯ ಪ್ರತಿರೂಪವೇ...........
ನವಿಲ ನಾಟ್ಯದಂತೆ ನಿನ್ನ ನಡಿಗೆ
ಲತೆಯು ಬಳುಕುವಂತೆ ನಿನ್ನ ನಡುಗೆ
ನವಿಲೇ ಸೋತು ನಾಟ್ಯವ ಮರೆತು
ನಿನಗಾರು ಸಾಟಿ ಚಲುವೆ ಎಂದಿತು............
ಮೋಹದ ಆಸೆಯ ಕಂಗಳ ಕಾಂತಿಗೆ
ನಾ ಸೋತೆ ನಿನ್ನದರಕೆ
ಸೇಬಿನ ಬಣ್ಣದ ಕೆಂಪು ಕೆನ್ನೆಗೆ
ಬೆರಗಾದೆ ಸೌಂದರ್ಯಕೆ..............
ಹೃದಯವು ಹಾಡಿತು ಮೋಹದಿಂದಲಿ
ಪ್ರೀತಿ ತುಂಬಿದ ಬಯಕೆಯಿಂದಲಿ
ಸಹಿಸಲಾರೆ ನಾ ಈ ತವಕ
ನೀ ಒಲಿದರೆ ಜನುಮ ಸಾರ್ಥಕ................
ಚಲುವೆ ಮೋಹದೀ ನುಡಿಸು ನೀ
ನನ್ನ ಹೃದಯದ ವೀಣೆಯಾ
ಹೊಸಹೊಸ ರಾಗವ ಹಾಡುತ ಗೆಳತಿ
ಈ ಜೀವ ಉಳಿಸುವೆಯಾ............
ಒಲಿದು ಬಾರೆ ರತಿಯ ತಂಗಿಯೇ
ಪ್ರೀತಿ ತಾರೆ ಈ ಬರಡು ಜೀವಕೆ
ದೀಪವಾಗಿ ಬಾಳ ಬೆಳಗಿಸು
ಬೇಡವಾದರೆ ಈ ಉಸಿರ ನಿಲ್ಲಿಸು................
ಬೇಡವಾದರೆ ಈ ಉಸಿರ ನಿಲ್ಲಿಸು................


